ಸಿನಿಮಾದಲ್ಲಿನ ದೃಶ್ಯಕ್ಕಿಂತಲೂ ಭೀಕರ ಈ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಜೋಧಪುರ್(ರಾಜಸ್ಥಾನ): ಅತ್ಯಂತ ಭೀಕರವಾಗಿ ನಡೆದ ಅಪಘಾತ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಜಸ್ಥಾನದ ಜೋಧಪುರ್ದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಸುಮಾರು ಮೀಟರ್ ದೂರ ಹೋಗಿ, ಐದು ಸಲ ಪಲ್ಟಿಯಾಗಿದೆ. ಇಂತಹ ದೃಶ್ಯ ಸಿನಿಮಾಗಳಲ್ಲೂ ನೋಡಲು ಸಾಧ್ಯವಿಲ್ಲ. ಘಟನೆಯಲ್ಲಿ ಡ್ರೈವರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.