ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಚಕ್ಕಾ ಜಾಮ್ ಪ್ರತಿಭಟನೆ: ಪೊಲೀಸ್ ಸರ್ಪಗಾವಲು - ದೆಹಲಿಯಲ್ಲಿ ರಸ್ತೆ ತಡೆದು ಪ್ರತಿಭಟನೆ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ರಸ್ತೆ ತಡೆ ಮಾಡಿ ಚಕ್ಕಾ ಜಾಮ್ ಪ್ರತಿಭಟನೆ ನಡೆಸುತ್ತಿದ್ದಾರೆ. ಜ.26ರಂದು ರಾಜಧಾನಿಯಲ್ಲಿ ನಡೆದ ಘಟನೆಯಿಂದ ಎತ್ತೆಚ್ಚುಕೊಂಡಿರುವ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ದೆಹಲಿಯ ಗಡಿ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಿದೆ. ಪ್ರಮುಖವಾಗಿ ಗಾಜಿಪುರ್, ಟಕ್ರಿ ಹಾಗೂ ಸಿಂಘು ಗಡಿ ಭಾಗದಲ್ಲಿ ಖಾಕಿ ಕಣ್ಗಾವಲಿರಿಸಿದೆ. ಅಷ್ಟೇ ಅಲ್ಲದೆ ಪಂಜಾಜ್, ಹರಿಯಾಣ, ಉತ್ತರ ಪ್ರದೇಶಗಳಲ್ಲೂ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ರಾಜಧಾನಿಯಲ್ಲಿ ಮಾತ್ರವಲ್ಲದೇ ರಾಜ್ಯದ ಕೆಲ ಭಾಗಗಳಲ್ಲಿಯೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.