ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಾರಾಮಾರಿ.. ಲಾಠಿಚಾರ್ಜ್ - ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ವಿಧಾನಸಭೆ ಚುನಾವಣೆ ಹಿನ್ನೆಲೆ ನಡೆಯುತ್ತಿದ್ದ ಬಿಜೆಪಿ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಇಲ್ಲಿನ ಅಮ್ಹಾರ್ಟ್ ಸ್ಟ್ರೀಟ್ನಲ್ಲಿ ರ್ಯಾಲಿ ಆಗಮಿಸುತ್ತಿದ್ದಂತೆ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಸಹ ನಡೆಸಿದ್ದಾರೆ.