ಮದ್ಯದಂಗಡಿ ತೆರೆವಿಗೆ ವಿರೋಧ : ಪೊಲೀಸರು - ಗ್ರಾಮಸ್ಥರ ನಡುವೆ ಬಿಗ್ ಫೈಟ್ - liquor shop
ಜಾರ್ಖಂಡ್: ಇಲ್ಲಿನ ಸಾಹಿಬ್‌ಗಂಜ್ ಜಿಲ್ಲೆಯ ಬ್ಯಾರಿ ಗ್ರಾಮದಲ್ಲಿ ಪರವಾನಗಿ ಪಡೆದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮದ್ಯದಂಗಡಿಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.