ಜಾರ್ಖಂಡ್ನಲ್ಲಿ ಪ್ರಿಯಾಂಕಾ ಅಬ್ಬರ: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕಿ ಭಾಗಿ - ಚುನಾವಣಾ ಪ್ರಚಾರದಲ್ಲಿ ಕೈ ನಾಯಕಿ ಭಾಗಿ
ಪಾಕೂರ್(ಜಾರ್ಖಂಡ್): ಉತ್ತರ ಪ್ರದೇಶದ ಪೂರ್ವಭಾಗದ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಜಾರ್ಖಂಡ್ನ ಪಾಕೂರ್ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಭಾರತೀಯ ಜನತಾ ಪಾರ್ಟಿ(ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ರು. ಇದೇ ವೇಳೆ ಕೇಂದ್ರ ಸರ್ಕಾರ ಜಾರಿ ಮಾಡಲು ನಿರ್ಧರಿಸಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.