ಕೋವಿಡ್ -19 ಭೀತಿ: ತಾಜ್ ಮಹಲ್‌ನಲ್ಲಿ ವಿದೇಶಿ ಪ್ರವಾಸಿಗರ ತಪಾಸಣೆ - ಕೊರೊನಾ ವೈರಸ್
ಆಗ್ರಾ (ಉತ್ತರ ಪ್ರದೇಶ): ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆಗ್ರಾ ಜಿಲ್ಲಾಡಳಿತವು ವಿದೇಶಿ ಪ್ರವಾಸಿಗರಿಗೆ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸುತ್ತಿದೆ. ಜಿಲ್ಲಾಧಿಕಾರಿ ನಿವಾಸದಲ್ಲಿ ಆರೋಗ್ಯ ಇಲಾಖೆ ಹಾಗೂ ಆಡಳಿತ ಅಧಿಕಾರಿಗಳ ನಡುವೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದೇಶದಿಂದ ಬರುವ ಪ್ರವಾಸಿಗರ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಗಾಗಿ ತಂಡಗಳನ್ನು ರಚಿಸಲಾಗಿದೆ. ತಾಜ್‌ಮಹಲ್ ಬಳಿ ಇರುವ ಶಿಲ್ಪಗ್ರಾಮ್ನ ಪಾರ್ಕಿಂಗ್ ಪ್ರದೇಶದಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ. ಜಿಲ್ಲಾ ಆಸ್ಪತ್ರೆ, ಪಾರ್ಕಿಂಗ್ ಪ್ರದೇಶ ಮತ್ತು ದಯಾಲ್ಬಾಗ್ನಲ್ಲಿ ಮೂರು ತಂಡಗಳು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸುತ್ತಿದ್ದಾರೆ. ಥರ್ಮಲ್ ಗನ್ ಮೂಲಕ ಈ ಪರೀಕ್ಷೆ ನಡೆಸಲಾಗುತ್ತಿದೆ. ದೇಶದಲ್ಲಿ ಈವರೆಗೆ ಪತ್ತೆಯಾದ 30 ಕೊರೊನಾ ವೈರಸ್ ಪ್ರಕರಣಗಳಲ್ಲಿ ಆಗ್ರಾದ 6 ಜನ ಸೇರಿದ್ದಾರೆ.