ರೈಲು ಸೇವೆ ಕಲ್ಪಿಸುವಂತೆ ಒತ್ತಾಯಿಸಿ ನಲಸೋಪಾರ ಜನತೆಯಿಂದ ಪ್ರತಿಭಟನೆ - ರೈಲು
ಕೊರೊನಾ ಮಹಾಮಾರಿ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮಾಡಲಾಗಿದೆ. ಇಲ್ಲಿನ ನಲಸೋಪಾರದ ಜನತೆಗೆ ಓಡಾಡಲು ರಾಜ್ಯ ಸಾರಿಗೆ ವ್ಯವಸ್ಥೆ ಸರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಹಾಗೂ ಅಗತ್ಯ ಕಾರ್ಯಗಳಿಗೆ ತೆರಳಲು ಅನುಮತಿ ನೀಡಬೇಕು ಮತ್ತು ಸ್ಥಳೀಯ ರೈಲುಗಳ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.