ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ಅಡ್ಡಿ: ಬಿಪಿನ್ ರಾವತ್ - ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್
ದೆಹಲಿ: ಇಂದು ಭೂ ಸೇನಾ ದಿನ ಆಗಿರುವುದರಿಂದ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ವಿವಿಧ ಗಣ್ಯರು, ಸೇನಾ ಮುಖ್ಯಸ್ಥರು ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್, ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಅಡ್ಡಿಯಾಗುತ್ತಿದೆ. ಎಲ್ಲರೂ ಒಟ್ಟಾಗಿ ಹೋರಾಡಿದಾಗ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಮಾಡಬಹುದು ಎಂದರು.