ಕುಟುಂಬಸ್ಥರ ವಿರೋಧ: ಠಾಣೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ
ಕಾನ್ಪುರ: ಲಾಕ್ಡೌನ್ ಹಿನ್ನೆಲೆ ದೇಶಾದ್ಯಂತ ಮದುವೆಗಳು ನಿಂತಿವೆ. ಇದರ ಮಧ್ಯೆ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಮನೆಯವರ ವಿರೋಧದ ನಡುವೆ ಪೊಲೀಸ್ ಠಾಣೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮದುವೆ ಮಾಡಿಕೊಂಡಿರುವ ಜೋಡಿಗೆ ಪೊಲೀಸ್ ಸಿಬ್ಬಂದಿ ಶುಭ ಹಾರೈಸಿದ್ದಾರೆ. ಇವರ ಮದುವೆಗೆ ಎರಡು ಕುಟುಂಬದ ಸದಸ್ಯರ ವಿರೋಧ ವ್ಯಕ್ತವಾಗಿತ್ತು ಎಂದು ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ ಅಂತರ್ಗತ್ನ ಬಿಬಿಪುರದಲ್ಲಿ ಈ ಘಟನೆ ನಡೆದಿದೆ.