ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೂ ಜ.22ಕ್ಕೆ ಮರಣದಂಡನೆ - ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಶಿಕ್ಷೆ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕೊನೆಗೂ ಮೃತಳ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಚಲಿಸುತ್ತಿದ್ದ ಬಸ್‌ನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಅತ್ಯಂತ ಮೃಗೀಯವಾಗಿ ವರ್ತಿಸಿ ಆಕೆಯ ಸಾವಿಗೆ ಕಾರಣರಾಗಿದ್ದ ನಾಲ್ವರು ದುಷ್ಟರಿಗೆ ಗಲ್ಲು ಶಿಕ್ಷೆ ನೀಡಿದ್ದ ದೆಹಲಿ ನ್ಯಾಯಾಲಯ ಇದು ಗಲ್ಲಿಗೇರಿಸುವ ದಿನಾಂಕ ನಿಗದಿ ಮಾಡಿದೆ.