ಅತ್ತೆ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಸೊಸೆ: ವಿಡಿಯೋ ವೈರಲ್ - ಅತ್ತೆ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಸೊಸೆ
ಗಾಂಧಿನಗರ(ಹೈದರಾಬಾದ್): ಸೌದಿಯಲ್ಲಿರುವ ತನ್ನ ಗಂಡನೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಸೊಸೆಯೊಬ್ಬಳು ಅತ್ತೆ ಮೇಲೆ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಲ್ಲಿನ ಗಾಂಧಿನಗರದಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಬಿನ್ ಖಾನ್ ಪತ್ನಿ ಅತ್ತೆ ಜತೆ ವಾಸವಾಗಿದ್ದು, ಈಕೆಯ ಗಂಡ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನೊಂದಿಗೆ ಮಾತನಾಡಲು ಸರಿಯಾಗಿ ಅವಕಾಶ ನೀಡುತ್ತಿಲ್ಲ ಎಂಬ ಆಕ್ರೋಶದಲ್ಲಿ ಅತ್ತೆ ಮೇಲೆ ಹಲ್ಲೆ ನಡೆಸಿದ್ದು, ಆಕೆಯ ಕೂದಲು ಹಿಡಿದು ನಡುರಸ್ತೆಯಲ್ಲಿ ಎಳೆದಾಡಿದ್ದಾಳೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.