ಹೋಳಿ ಆಚರಣೆ: ನವದೆಹಲಿಯಲ್ಲಿ ಪೊಲೀಸ್ ಸರ್ಪಗಾವಲು
ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ ಹೋಳಿ ಆಚರಣೆಗೆ ಭಾರಿ ಭದ್ರತೆ ಒದಗಿಸಲಾಗಿದೆ. ಮತ್ತೆ ಗಲಭೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇದಕ್ಕಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಗಲಭೆ ಪೀಡಿತ ಪ್ರದೇಶ ಹಾಗೂ ಗಾಜಿಯಾಬಾದ್ ಸುತ್ತಮುತ್ತ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಈ ಪ್ರದೇಶಗಳಲ್ಲಿ ಡ್ರಂಕ್ ಅಂಡ್ ಡ್ರೈವ್, ರಸ್ತೆ ನಿಯಮ ಉಲ್ಲಂಘನೆಯಂತಹ ಪ್ರಕರಣಗಳ ಮೇಲೂ ಪೊಲೀಸರು ನಿಗಾ ಇಟ್ಟಿದ್ದಾರೆ. ವಜೀರಾಬಾದ್ ರೋಡ್, ತುಳಸಿ ನಿಕೇತನ್ ಬಾರ್ಡರ್ಗಳಲ್ಲಿ ರಸ್ತೆಗಳನ್ನ ಬಂದ್ ಮಾಡಲಾಗಿದೆ. ಅಲ್ಲದೆ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.