ರಾಷ್ಟ್ರ ರಾಜಧಾನಿ ಮೇಲೆ 'ಡ್ರೋನ್' ಕಣ್ಗಾವಲು.. 'ಚಕ್ಕಾ ಜಾಮ್' ವೇಳೆ ಹಿಂಸಾಚಾರ ನಡೆಯದಂತೆ ಕ್ರಮ!
ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಇಂದು ದೇಶಾದ್ಯಂತ ಹೆದ್ದಾರಿ ಬಂದ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈಗಾಗಲೇ ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಪರೇಡ್ ವೇಳೆ ಹಿಂಸಾಚಾರ ನಡೆದಿರುವ ಕಾರಣ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ದೆಹಲಿಯ ಸುತ್ತಮುತ್ತಲು 50 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಟಿಕ್ರಿ ಬಾರ್ಡರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಕ್ಯಾಮರಾ ಬಳಕೆ ಮಾಡಲಾಗುತ್ತಿದ್ದು, ಅವು ಹದ್ದಿನ ಕಣ್ಣಿಡಲಿವೆ.