ರೈತರೇ ನಮ್ಮ ದೇವರು: ಈಟಿವಿ ಭಾರತ ಸಂದರ್ಶನದಲ್ಲಿ ಸಚಿವ ಪ್ರಭು ಚವ್ಹಾಣ್ - Prabhu Chauhan interview
ಬೀದರ್/ ಹೈದರಾಬಾದ್: ರಾಜ್ಯದಲ್ಲಿ ಕೊರೊನಾ ಸಂಕಷ್ಟ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಕಳೆದ ಬಾರಿ ಪ್ರವಾಹದಿಂದ ತತ್ತರಿಸಿದ್ದ ನಾಡಿಗೆ ನಂತರ ಬರಗಾಲ, ಈಗ ಕೊರೊನಾ ಹೊಡೆತ. ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಸೃಷ್ಟಿಸಿದ ಅವಾಂತರ ಎಂಥಾದ್ದು? ಮುಖ್ಯವಾಗಿ ಉತ್ತರ ಕರ್ನಾಟಕದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ? ಇಲ್ಲಿನ ರೈತರಿಗೆ ಸರ್ಕಾರ ಯಾವ ರೀತಿ ಸಹಾಯ ಮಾಡಿದೆ? ಇಲ್ಲಿನ ವಲಸಿಗರ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ರಾಜ್ಯ ಪಶುಸಂಗೋಪನಾ ಸಚಿವ ಹಾಗೂ ಬೀದರ್ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಈಟಿವಿ ಭಾರತದ ಜೊತೆಗೆ ಮಾತನಾಡಿದ್ದಾರೆ.