ಸೆಪ್ಟೆಂಬರ್ 30ಕ್ಕೆ ಬಾಬರಿ ಮಸೀದಿ ತೀರ್ಪು ಪ್ರಕಟ: ಉಮಾ ಭಾರತಿ ಏನಂತಾರೆ? - ಬಿಜೆಪಿ ಮುಖ್ಯಸ್ಥರಾದ ಮುರಳಿ ಮನೋಹರ್ ಜೋಶಿ
ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್ 30ರಂದು ಪ್ರಕಟಿಸುವುದಾಗಿ ವಿಶೇಷ ಸಿಬಿಐ ನ್ಯಾಯಾಲಯವು ನಿರ್ಧರಿಸಿದೆ. ಈ ಬಳಿಕ ಆರೋಪಿ ಸ್ಥಾನದಲ್ಲಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಮಾತನಾಡಿದ್ದು,"ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ. ನ್ಯಾಯಾಂಗದ ತೀರ್ಪನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದಿದ್ದಾರೆ. ಇನ್ನು ಅಯೋಧ್ಯೆಯ ಈ ಪ್ರಕರಣದ ತೀರ್ಪಿನ ದಿನಾಂಕವನ್ನು ಲಖನೌ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರು ಬುಧವಾರ ನಿಗದಿಪಡಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ನ್ಯಾಯಾಲಯವು ಎಲ್ಲಾ 32 ಆರೋಪಿಗಳ ಹೇಳಿಕೆಗಳನ್ನು ದಾಖಲಿಸುವ ಮೂಲಕ ಪ್ರಕರಣದ ಎಲ್ಲಾ ವಿಚಾರಣೆಗಳನ್ನು ಪೂರ್ಣಗೊಳಿಸಿದೆ. ಇದರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಬಿಜೆಪಿ ಮುಖ್ಯಸ್ಥರಾದ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಮತ್ತು ಉಮಾ ಭಾರತಿ ಆರೋಪಿ ಸ್ಥಾನದಲ್ಲಿದ್ದಾರೆ. ಸೆಪ್ಟೆಂಬರ್ 30ರೊಳಗೆ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸೂಚಿಸಿತ್ತು.
TAGGED:
Babri Masjid demolition case