ಕೇಂದ್ರದ ವಿರುದ್ಧ ಸಿಡಿದೆದ್ದ ಅನ್ನದಾತ... ಕೃಷಿ ಮಸೂದೆ ಪ್ರತಿ ಸುಟ್ಟುಹಾಕಿ ಆಕ್ರೋಶ! - ಕೃಷಿ ಮೂಸದೆ 2020
ನವದೆಹಲಿ: ಕೇಂದ್ರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 49 ದಿನಗಳಿಂದ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಮುಂದುವರೆದಿದೆ. ಸಿಂಘು ಗಡಿಯಲ್ಲಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿರುವ ರೈತರು, ಕೃಷಿ ಮಸೂದೆಗಳ ಪ್ರತಿ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಕೃಷಿ ಮಸೂದೆಯಲ್ಲಿನ ಲೋಪದೋಷ ಕಂಡು ಹಿಡಿಯುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ನಾಲ್ವರು ಸದಸ್ಯರ ಸಮಿತಿ ರಚನೆ ಮಾಡಿದ್ದು, ಇದಕ್ಕೆ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.