ವ್ಯಾಪಾರ ಮಾಡಲು ಅನುಮತಿ ನಿರಾಕರಣೆ.. ತರಕಾರಿ ರಸ್ತೆಗೆ ಚೆಲ್ಲಿ ಪ್ರತಿಭಟನೆ - farmers thrown vegetables on road
ಉತ್ತರಪ್ರದೇಶದ ವಾರಣಾಸಿಯ ಕ್ಯಾಂಟ್ ಪ್ರದೇಶದ ತರಕಾರಿ ಮಾರುಕಟ್ಟೆ ಆರಂಭಿಸಲು ಅನುಮತಿ ನೀಡದ ಹಿನ್ನೆಲೆ ರೈತರು ಪ್ರತಿಭಟನೆ ನಡೆಸಿದ್ದಾರೆ. ತಾವು ಮಾರಲು ತಂದಿದ್ದ ತರಕಾರಿಗಳನ್ನೆಲ್ಲಾ ರಸ್ತೆಯಲ್ಲಿ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತರಕಾರಿ ಮಾರಲು ಸಮಯ ನಿಗದಿ ಪಡಿಸುವಂತೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಮಾರಾಟಕ್ಕೆ ಸಮಯ ನಿರ್ಧರಿಸುವ ಕುರಿತು ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ, ಆ ಕುರಿತು ಚರ್ಚಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.