ಥಾಣೆಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ - ವಿಡಿಯೋ ನೋಡಿ - Thane fire
ಥಾಣೆ (ಮಹಾರಾಷ್ಟ್ರ): ಥಾಣೆಯ ಅಸಂಗಾಂವ್ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 12 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಇಂದು ನಸುಕಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.