ದೆಹಲಿ ಏಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಅಗ್ನಿ ಅವಘಡ.. 34 ಅಗ್ನಿಶಾಮಕ ದಳ ದೌಡು! - ಅಗ್ನಿಶಾಮಕ ದಳ ದೌಡು
ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ದೆಹಲಿಯ ಏಮ್ಸ್ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 34 ಅಗ್ನಿಶಾಮಕ ದಳದ ವಾಹನ ತೆರಳಿವೆ. ಆಸ್ಪತ್ರೆಯ ಐದನೇ ಮಹಡಿಯಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ತುರ್ತು ನಿಗಾ ಘಟಕದಲ್ಲಿನ ವೈದ್ಯರ ಕೊಠಡಿಗಳಿಗೆ ಹಾನಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇಲ್ಲಿಯವರೆಗೆ ಯಾವುದೇ ಸಾವು-ನೋವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
Last Updated : Aug 17, 2019, 7:18 PM IST