ಮೇಕೆ ಸಾಕಾಣಿಕೆ ಶೆಡ್ನಲ್ಲಿ ಅಗ್ನಿ ಅವಘಡ: ಬೆಂಕಿಯ ಕೆನ್ನಾಲಗೆಗೆ 50 ಗುಡಿಸಲುಗಳು ಭಸ್ಮ - kolkata fire incident
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ನರ್ಕಲ್ಡಂಗಾ ಪ್ರದೇಶದಲ್ಲಿನ ಮೇಕೆ ಸಾಕಾಣಿಕೆ ಶೆಡ್ಗೆ ಬೆಂಕಿ ಹತ್ತಿಕೊಂಡ ಪರಿಣಾಮ, ಸುತ್ತಮುತ್ತಲಿನ 50 ಗುಡಿಸಲು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಿಯಂತ್ರಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.