ಅಸ್ಸೊಂನಲ್ಲಿ ಮುಂದುವರಿದ ಪ್ರವಾಹ ಪರಿಸ್ಥಿತಿ: 110 ಜನರು ಸಾವು - ಉಕ್ಕಿ ಹರಿಯುತ್ತಿರುವ ಬ್ರಹ್ಮಪುತ್ರ ನದಿ
ಅಸ್ಸೊಂ: ರಾಜ್ಯದ 15 ಜಿಲ್ಲೆಗಳು ಪ್ರವಾಹದಿಂದ ಬಾಧಿತವಾಗಿವೆ. ಬ್ರಹ್ಮಪುತ್ರ ಮತ್ತು ಅದರ ಉಪನದಿಗಳು 23 ವಲಯಗಳ 325 ಹಳ್ಳಿಗಳಲ್ಲಿ ಉಕ್ಕಿ ಹರಿಯುತ್ತಿವೆ. 110 ಜನರು ಪ್ರಾಣ ಕಳೆದುಕೊಂಡಿದ್ದು, 1,95,689 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,591.82 ಹೆಕ್ಟೇರ್ ಕೃಷಿ ಪ್ರದೇಶ ಜಲಾವೃತಗೊಂಡಿದೆ. ಬ್ರಹ್ಮಪುತ್ರ ಮತ್ತು ಇತರ ನದಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.