ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ
ಕೊಲ್ಹಾಪುರ (ಮಹಾರಾಷ್ಟ್ರ): ಕಳೆದೊಂದು ವಾರದಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕೊಲ್ಹಾಪುರದಲ್ಲಿರುವ ಪಂಚಗಂಗಾ ನದಿಯೂ ಅಪಾಯದ ಮಟ್ಟ ದಾಟಿದೆ. ಈಗಾಗಲೇ 7 ಸಾವಿರ ಕ್ಯೂಸೆಕ್ಗಿಂತಲೂ ಹೆಚ್ಚಿನ ನೀರು ಹೊರಬಿಡಲಾಗುತ್ತಿದೆ. ಜಿಲ್ಲೆಯ 25 ಗ್ರಾಮಗಳಿಂದ 5 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ನದಿಯಿಂದ ಹೊರಬರುತ್ತಿರುವ ನೀರು ನೇರವಾಗಿ ಕರ್ನಾಟಕದ ಕೃಷ್ಣಾ ನದಿ ಮೂಲಕ ಆಲಮಟ್ಟಿ ಡ್ಯಾಂ ಸೇರಿಕೊಳ್ಳುತ್ತಿದೆ. ಇದರಿಂದ ರಾಜ್ಯದ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದ ನೆರೆಹಾವಳಿ ಪರಿಸ್ಥಿತಿ ನಿರ್ಮಾಣಗೊಂಡಿದೆ.