ಗಾಜಿಯಾಬಾದ್ ದುರಂತ.. ಮೃತರ ಕುಟುಂಬಸ್ಥರಿಂದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ - ಗಾಜಿಯಾಬಾದ್ ಅಪರಾಧ ಸುದ್ದಿ
ಗಾಜಿಯಾಬಾದ್ : ಸ್ಮಶಾನದ ಆವರಣ ಗೋಡೆ ಕುಸಿದು ಸುಮಾರು 25 ಮಂದಿ ಮೃತಪಟ್ಟಿರುವ ಘಟನೆ ದೆಹಲಿ-ಉತ್ತರ ಪ್ರದೇಶ ಗಡಿ ಪ್ರದೇಶವಾದ ಗಾಜಿಯಾಬಾದ್ನಲ್ಲಿ ನಿನ್ನೆ ನಡೆದಿದೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರು ಘಟನೆಯ ಕುರಿತು ಸಂಪೂರ್ಣ ತನಿಖೆಗೆ ನಡೆಸಿ ತಪ್ಪಿತಸ್ಥರನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದ್ದು, ಮುಂಜಾಗೃತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಪುರಸಭೆಯ ಇಒ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.