ರೈತರ ಎಲ್ಲ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಸಿದ್ಧ: ಬಿಜೆಪಿ ಮುಖಂಡ ಹರ್ಜಿತ್ ಸಿಂಗ್
ನವದೆಹಲಿ: ರೈತರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಬಿಜೆಪಿ ಮುಖಂಡ ಹರ್ಜಿತ್ ಸಿಂಗ್ ಗ್ರೆವಾಲ್ ಹೇಳಿದ್ದಾರೆ. ಗೃಹ ಸಚಿವ ಅಮಿತ್ ಶಾರೊಂದಿಗೆ ನಡೆದ ಸಭೆ ಬಳಿಕ ಮಾತನಾಡಿರು ಅವರು, ರೈತರು ಕೃಷಿ ಕಾನೂನು ರದ್ಧುಪಡಿಸಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಅವರು ಈ ರೀತಿಯಾಗಿ ಹೇಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿರುವ ಅವರು, ರೈತ ಸಂಘಟನೆಗಳು ಪರಿಹಾರ ಬಯಸುತ್ತಿಲ್ಲ ಎಂಬುದು ಇದರಿಂದ ಗೊತ್ತಾಗುತ್ತಿದೆ ಎಂದಿದ್ದಾರೆ.