'ಕೃಷಿ ಕಾಯ್ದೆಗಳ ಹಿಂಪಡೆಯಲು ಸರ್ಕಾರ ಸಿದ್ಧವಿಲ್ಲ; ಮುಂದಿನ ಹೋರಾಟದ ಬಗ್ಗೆ ಚರ್ಚಿಸುವೆವು'
ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ, 'ವಿವಾದಾತ್ಮಕ ಕೃಷಿ ಕಾಯ್ದೆಗಳ ತಿದ್ದುಪಡಿಗೆ ರೈತರು ಇರಿಸಿದ್ದ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇಂದು ರೈತರು ಮತ್ತು ಸರ್ಕಾರದ ನಡುವೆ ಯಾವುದೇ ಸಭೆ ನಡೆಯುವುದಿಲ್ಲ. ಮಧ್ಯಾಹ್ನ 12 ಗಂಟೆಗೆ ಸಿಂಘು ಗಡಿಯಲ್ಲಿ (ದೆಹಲಿ-ಹರಿಯಾಣ ಗಡಿ ಪ್ರದೇಶ) ನಾವೆಲ್ಲ ಸಭೆ ನಡೆಸುತ್ತೇವೆ. ಅಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ' ಎಂದು ತಿಳಿಸಿದ್ದಾರೆ.