ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಒತ್ತಾಯ: ಕಾವೇರಿ ಬಗ್ಗೆಯೂ ಧ್ವನಿಯೆತ್ತಿದ ದೇವೇಗೌಡ - ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ
ಒಬ್ಬ ರೈತನಾಗಿ ನಾನು ರೈತರ ಸಮಸ್ಯೆಗಳನ್ನು ಅರಿತಿದ್ದೇನೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದು, ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸಬೇಕು ಎಂದು ರಾಜ್ಯಸಭೆಯಲ್ಲಿ ಸದಸ್ಯ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಟ್ರ್ಯಾಕ್ಟರ್ ಱಲಿ ವೇಳೆಯ ಹಿಂಸಾಚಾರಕ್ಕೆ ರೈತರು ಕಾರಣರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಕಾವೇರಿಗಾಗಿ ನಾವು ತಮಿಳುನಾಡು, ಕೇರಳ ಜೊತೆ ಹೋರಾಟ ಮಾಡುತ್ತಲೇ ಇದ್ದೇವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದು ಹೆಚ್ಡಿಡಿ ಒತ್ತಾಯಿಸಿದ್ದಾರೆ.