ತಮಿಳುನಾಡಿನಲ್ಲಿ ಅಮಿತ್ ಶಾ: ಕಾರ್ಯಕರ್ತರಿಂದ ಭರ್ಜರಿ ಸ್ವಾಗತ- VIDEO - Thamilnadu News
ಚೆನ್ನೈ: ಸುಮಾರು 67,000 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆಗಾಗಿ ಇಂದು ಮಧ್ಯಾಹ್ನ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈಗೆ ಆಗಮಿಸಿದರು. ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ. ಪನ್ನೀರಸೆಲ್ವಂ, ಸಂಸದ ರವೀಂದ್ರನಾಥ್, ಬಿಜೆಪಿ ರಾಜ್ಯ ನಾಯಕ ಮುರುಗನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಅವರಿಗೆ ಸ್ವಾಗತಕೋರಿದರು.