ಮುತ್ತಿನ ನಗರಿಯಲ್ಲಿ ಮತ್ತೆ ಮಳೆಯಾರ್ಭಟ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು! - ಹೈದರಾಬಾದ್ನಲ್ಲಿ ಮತ್ತೆ ಮಳೆಯ ಆರ್ಭಟ
ಹೈದರಾಬಾದ್: ಕಳೆದ ಮೂರು ದಿನಗಳ ಹಿಂದೆ ಮಹಾಮಳೆಗೆ ತತ್ತರಿಸಿ ಹೋಗಿದ್ದ ಮುತ್ತಿನ ನಗರಿ ಹೈದರಾಬಾದ್ನಲ್ಲಿ ಇಂದು ಮತ್ತೆ ವರುಣ ಆರ್ಭಟಿಸಿದ್ದಾನೆ. ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾದ ಕಾರಣ ಕೆಲವೊಂದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣ ವಾಹನ ಸವಾರರು ತೊಂದರೆ ಅನುಭವಿಸಿದರು. ಕಳೆದ ಮೂರು ದಿನಗಳ ಹಿಂದೆ ಸುರಿದ ಮಳೆಗೆ ತೆಲಂಗಾಣದಲ್ಲಿ 50 ಜನರು ಸಾವನ್ನಪ್ಪಿದ್ದಾರೆ.