ಅನರ್ಹರ ಚುನಾವಣೆ ಸ್ಪರ್ಧೆ ಬಗ್ಗೆ ಮುರಳೀಧರ್ ರಾವ್ ಏನಂದ್ರು..? - ಈಟಿವಿ ಭಾರತದೊಂದಿಗೆ ಪಿ ಮುರಳೀಧರ್ ರಾವ್ ಮಾತು
ನವದೆಹಲಿ: ಮೈತ್ರಿ ಸರ್ಕಾರದ ಪತನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ 17 ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ಇಂದು ಸುಪ್ರೀಂಕೋರ್ಟ್ ನಿರ್ಧರಿಸಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಈಟಿವಿ ಭಾರತದೊಂದಿಗೆ ಮುಕ್ತವಾಗಿ ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಮುರಳೀಧರ್ ರಾವ್, ಅನರ್ಹರ ಚುನಾವಣೆ ಸ್ಪರ್ಧೆ ಹಾಗೂ ಬಿಜೆಪಿ ಸೇರ್ಪಡೆ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.