ಕುಂಭಮೇಳ 2021: ಹೀಗಿದೆ ನೋಡಿ ಸಿದ್ಧತೆ
ಹರಿದ್ವಾರ: ಕೋವಿಡ್ -19 ಸಾಂಕ್ರಾಮಿಕದ ನಡುವೆಯೂ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಏಪ್ರಿಲ್ 01 ರಿಂದ 30 ರವರೆಗೆ ಪವಿತ್ರ ನಗರ ಹರಿದ್ವಾರದಲ್ಲಿ ಕುಂಭಮೇಳ ನಡೆಯಲಿದ್ದು, ಭಕ್ತರಿಗೆ ಕುಡಿಯುವ ನೀರು, ಆಸ್ಪತ್ರೆಗಳು, ಕ್ಯಾಂಟೀನ್ ಮತ್ತು ಸಹಾಯ ಕೇಂದ್ರದಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಜೊತೆಗೆ ಕಣ್ಗಾವಲಿಗೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.