ಕೋವಿಡ್ ಪಾಸಿಟಿವ್ ದೃಢಪಟ್ಟ ಮೇಲೆ ನನ್ನ ಬಟ್ಟೆ ನಾನೇ ತೊಳೆಯುತ್ತಿದ್ದೇನೆ: ಸಿಎಂ ಚೌಹಾಣ್! - ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್(ಮಧ್ಯಪ್ರದೇಶ): ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಆಸ್ಪತ್ರೆಯಿಂದಲೇ ವಿಡಿಯೋ ಹರಿಬಿಟ್ಟಿರುವ ಸಿಎಂ, ಸೋಂಕು ಕಾಣಿಸಿಕೊಂಡಾಗಿನಿಂದಲೂ ನನ್ನ ಬಟ್ಟೆ ನಾನೇ ತೊಳೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದು ನನಗೆ ಸಾಕಷ್ಟು ಪ್ರಯೋಜನೆ ನೀಡಿದೆ. ಆರಂಭದಲ್ಲಿ ಕೆಲಸ ಮಾಡಲು ತುಂಬಾ ಕಷ್ಟವಾಗುತ್ತಿತ್ತು. ಆದರೆ, ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ನನ್ನ ಕೆಲಸ ನಾನೇ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.