ಮಧ್ಯಪ್ರದೇಶ: ಯುವಕನ ಮೇಲೆ ಗುಂಪಿನಿಂದ ಮಾರಣಾಂತಿಕ ಹಲ್ಲೆ - ವಿಡಿಯೋ - ಯುವಕನ ಮೇಲೆ ಗುಂಪಿನಿಂದ ಹಲ್ಲೆ ಸುದ್ದಿ
ಮಧ್ಯಪ್ರದೇಶ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನೌಗಾಂವ್ನ ಯಾದವೀಂದ್ರ ಸಿಂಗ್ ಕ್ರೀಡಾಂಗಣದ ಮುಂಭಾಗದಲ್ಲಿ ನಡೆದಿದೆ. ವೀರೇಂದ್ರ ಕಾಲೋನಿ ನಿವಾಸಿ ರಾಜ್‌ಕುಮಾರ್ ಸಾಹು ಎಂಬಾತನ ಮೇಲೆ ಬೈಕ್‌ನಲ್ಲಿ ಬಂದ ನಾಲ್ಕು ಜನರು ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸದ್ಯ ನೌಗಾಂವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.