ವೈಎಸ್ಆರ್ ಕಾಂಗ್ರೆಸ್ ವಿರುದ್ಧ ಮಾತನಾಡಿದ ವ್ಯಕ್ತಿ ಮೇಲೆ ಹಲ್ಲೆ - ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್ಆರ್ ಕಾಂಗ್ರೆಸ್
ನೆಲ್ಲೂರು : ಆಂಧ್ರದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ವಿರುದ್ಧ ಮಾತನಾಡಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಟಿಡಿಪಿಯ ವಾರ್ಡ್‌ನ ಮಾಜಿ ಸದಸ್ಯ ಮಿಲ್ಟನ್ ಎಂಬುವರ ಮೇಲೆ ವೈಎಸ್ಆರ್ ಕಾಂಗ್ರೆಸ್ ಬೆಂಬಲಿಗ ವೆಂಕಟೇಶ್ವರಲು ಎಂಬಾತ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಮಿಲ್ಟನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.