ಕಸದ ರಾಶಿಯಲ್ಲಿ ನವಜಾತ ಶಿಶು ಪತ್ತೆ... ಗ್ರಾಮಸ್ಥರಿಂದ ರಕ್ಷಣೆ! - ಕಸದ ರಾಶಿಯಲ್ಲಿ ನವಜಾತ ಶಿಶು
ವೆಲ್ಲೂರು(ತಮಿಳುನಾಡು): ಗಂಟೆಗಳ ಹಿಂದೆಯಷ್ಟೇ ಹುಟ್ಟಿದ್ದ ನವಜಾತ ಶಿಶುವೊಂದು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಅದನ್ನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚೆರ್ಕಾಡು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗಿದೆ. ಶಿಶುವನ್ನು ರಕ್ಷಣೆ ಮಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.