ಕಾಂಗ್ರೆಸ್ ಪಕ್ಷ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ: ಮಧ್ಯಪ್ರದೇಶ ಸಿಎಂ
ಭೋಪಾಲ್: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಉಂಟಾಗಿರುವ ಬಿಕ್ಕಟ್ಟು ವಿಚಾರವಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳುವವರು ಆರೋಪಿಗಳು. ಗುಲಾಂ ನಬಿ ಆಜಾದ್ ಹಾಗೂ ಕಪಿಲ್ ಸಿಬಲ್ ಅವರಂತಹ ಮುಖಂಡರ ಮೇಲೆ ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡಿರುವ ಆರೋಪ ಮಾಡುತ್ತಿದ್ದಾರೆ. ಇಂತಹ ಪಕ್ಷವನ್ನ ದೇಶದಲ್ಲಿ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.