ದೆಹಲಿ ಹಿಂಸಾಚಾರ ಹಿನ್ನೆಲೆ ನೋಯ್ಡಾದಲ್ಲಿ ಹೈ ಅಲರ್ಟ್ - ದೆಹಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ನೋಯ್ಡಾದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ದೆಹಲಿಯ ಗಡಿ ಭಾಗಗಳಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದ್ದು, ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಚೆಕ್ ಪೋಸ್ಟ್ಗಳಲ್ಲಿ ರಾತ್ರಿಯೂ ಕೂಡ ತಪಾಸಣೆ ಕಾರ್ಯಾ ನಡೆದಿದ್ದು ನೋಯ್ಡಾದಿಂದ ದೆಹಲಿಗೆ ಮತ್ತು ದೆಹಲಿಯಿಂದ ನೋಯ್ಡಾಕ್ಕೆ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹಾಗೆಯೇ ದೆಹಲಿಯಲ್ಲಿ ಸೆಕ್ಷನ್ 144 ಮುಂದುವರಿದಿದ್ದು, ಜಖೀರಾ, ಅಮರ್ ಪಾರ್ಕ್, ದೆಹಲಿ ಮುಂತಾದೆಡೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.