ನನ್ನ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ: ಸಿಎಂ ಮಮತಾ ಬ್ಯಾನರ್ಜಿ - ನಂದಿಗ್ರಾಮದಲ್ಲಿ ಮಮತಾ
ನಂದಿಗ್ರಾಮ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದ್ದಾರೆ. ನಾನು ಪ್ರಚಾರ ನಡೆಸುತ್ತಿದ್ದ ವೇಳೆ ಯಾವುದೇ ಪೊಲೀಸ್ ಅಧಿಕಾರಿ ಸ್ಥಳದಲ್ಲಿರಲಿಲ್ಲ. ನಾಲ್ಕೈದು ಜನರು ಉದ್ದೇಶಪೂರ್ವಕವಾಗಿ ನನ್ನನ್ನು ತಳ್ಳಿದ್ದಾರೆ. ಖಂಡಿತವಾಗಿ ಇದರ ಹಿಂದೆ ಪಿತೂರಿ ಇದೆ. ನನ್ನ ಕಾಲಿಗೆ ಗಾಯವಾಗಿದ್ದು, ಮಾತನಾಡಲು ಸಾಧ್ಯವಾಗುತ್ತಿಲ್ಲ, ಎದೆನೋವು ಸಹ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.