ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಮನೆಗೆ ಬೆಂಕಿ: ವೃದ್ಧೆ ಸಜೀವ ದಹನ - ಆಂಧ್ರಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಮನೆಗೆ ಬೆಂಕಿ
ಕಾಕಿನಾಡ (ಆಂಧ್ರಪ್ರದೇಶ): ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ (65) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.