ಕಮಲದ ಜೊತೆ ಪವನ್ 'ಕಲ್ಯಾಣ' : ಮೈತ್ರಿ ಬಗ್ಗೆ 'ಗಬ್ಬರ್ಸಿಂಗ್' ಹೇಳಿದ್ದೇನು? - ಪವನ್ ಕಲ್ಯಾನ್ ಮತ್ತು ಬಿಜೆಪಿ ಮೈತ್ರಿ
ಆಂಧ್ರ ಪ್ರದೇಶದಲ್ಲಿ ಬಿಜೆಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಮೈತ್ರಿ ಮಾಡಿಕೊಂಡಿದ್ದು, 2024ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಗುರಿ ಹೊಂದಲಾಗಿದೆ. ಪವನ್ ಕಲ್ಯಾಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕಣ್ಣ ಲಕ್ಷ್ಮಿನಾರಾಯಣ ಅವರು ಇಂದು ವಿಜಯವಾಡದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯದಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದಾಗಿ ಘೋಷಿಸಿದರು.