ಕರ್ನಾಟಕ

karnataka

ETV Bharat / videos

ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಮೋ! - ತಮಿಳುನಾಡು ವಿಧಾನಸಭೆ ಚುನಾವಣೆ

By

Published : Apr 1, 2021, 10:39 PM IST

ತಮಿಳುನಾಡಿನ ಮಧುರೈನಲ್ಲಿರುವ ಐತಿಹಾಸಿಕ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ನಡೆಸುವ ಉದ್ದೇಶದಿಂದ ಆಗಮಿಸಿರುವ ನಮೋ ನಾಳೆ ವಿವಿಧ ಸಭೆಗಳಲ್ಲಿ ಭಾಗಿಯಾಗಲಿದ್ದು, ಅದಕ್ಕೂ ಮುಂಚಿತವಾಗಿ ಇಂದು ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಕೆ ಮಾಡಿದ್ರು. ಇಂದು ರಾತ್ರಿ ಮಧುರೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ನೇರವಾಗಿ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್​ 6ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ABOUT THE AUTHOR

...view details