ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಸಲು ನೂಕುನುಗ್ಗಲು.. ಲಾಠಿಚಾರ್ಜ್ ಮಾಡಿದ ಪೊಲೀಸ್! - ಪಶ್ಚಿಮ ಬಂಗಾಳದಲ್ಲಿ ಲಾಠಿ ಚಾರ್ಜ್
ಮುರ್ಷಿದಾಬಾದ್(ಪಶ್ಚಿಮ ಬಂಗಾಳ): ಸರ್ಕಾರಿ ನೌಕರಿ ಪಡೆದುಕೊಳ್ಳುವ ಉದ್ದೇಶದಿಂದ ಅರ್ಜಿ ಸಲ್ಲಿಸಲು ಆಗಮಿಸಿದಾಗ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಈ ಘಟನೆ ನಡೆದಿದೆ. ಮುರ್ಷಿದಾಬಾದ್ನ ಬರ್ಹಾಂಪೋರ್ ಮೈದಾನದಲ್ಲಿ ಸರ್ಕಾರಿ ನೌಕರಿಗಾಗಿ ಅರ್ಜಿ ಸಲ್ಲಿಕೆ ಮಾಡಲಾಗುತ್ತಿತ್ತು. ಈ ವೇಳೆ, ಸಾವಿರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಸ್ಥಳಕ್ಕೆ ದೌಡಾಯಿಸಿರುವ ಕಾರಣ ನೂಕುನುಗ್ಗಲು ಉಂಟಾಗಿದೆ. ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿದರು.