ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾದ ಆರೋಪ; ಪೊಲೀಸ್ ಅಧಿಕಾರಿಗೆ ಥಳಿತ - ದೆಹಲಿಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ
ನವದೆಹಲಿ: ದ್ವಾರಕಾ ಜಿಲ್ಲೆಯ ಉತ್ತಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಮವಸ್ತ್ರ ಧರಿಸಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಮದ್ಯ ಸೇವಿಸಿ ಕಚೇರಿಗೆ ಬಂದಿದ್ದೇ ಜನರ ಕೋಪಕ್ಕೆ ಕಾರಣ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿಸಿಪಿ ಸಂತೋಷ್ ಮೀನಾ ಪ್ರತಿಕ್ರಿಯಿಸಿದ್ದು,' ಇದು 14 ದಿನಗಳ ಹಿಂದಿನ ಪ್ರಕರಣ. ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ ದಾಖಲಿಸಲಾಗಿದೆ' ಎಂದರು.