ಜನರಲ್ಲಿ ನಂಬಿಕೆ ಬರಬೇಕಾದ್ರೆ ರಾಜಕೀಯ ವ್ಯಕ್ತಿಗಳಿಗೆ ಮೊದಲ ಲಸಿಕೆ ನೀಡಿ: ಪುದುಚೇರಿ ಸಿಎಂ - ಕೋವಿಡ್ ವ್ಯಾಕ್ಸಿನ್ ಬಗ್ಗೆ ಪುದುಚೇರಿ ಸಿಎಂ ಮಾತು
ಪುದುಚೇರಿ: ಕೊರೊನಾ ಲಸಿಕೆಯನ್ನು ಯಾವುದೇ ಕಾರಣಕ್ಕೂ ಮೊದಲ ಹಂತದಲ್ಲಿ ರಾಜಕೀಯ ವ್ಯಕ್ತಿಗಳಿಗೆ ನೀಡಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ, ದೇಶದ ಜನರಲ್ಲಿ ನಂಬಿಕೆ ಬರಬೇಕಾದರೆ ರಾಜಕೀಯ ವ್ಯಕ್ತಿಗಳಿಗೆ ಮೊದಲ ಹಂತದಲ್ಲಿ ವ್ಯಾಕ್ಸಿನ್ ನೀಡುವಂತೆ ಮನವಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಸಿಎಂ, ಮೊದಲ ಹಂತದಲ್ಲಿ ರಾಜಕೀಯ ಪಕ್ಷದ ಮುಖಂಡರು, ಸಚಿವರು ಹಾಗೂ ಶಾಸಕರಿಗೆ ಈ ಲಸಿಕೆ ನೀಡಬೇಕು ಎಂದಿದ್ದಾರೆ.