ಟೋಲ್ ಪ್ಲಾಜಾದಲ್ಲಿ ವಾಹನ ಚಾಲಕರು ಮತ್ತು ಟೋಲ್ ಸಿಬ್ಬಂದಿ ನಡುವೆ ಮಾರಾಮಾರಿ -ವಿಡಿಯೋ - ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಘಟನೆ
ಉಜ್ಜಯಿನಿ (ಮಧ್ಯಪ್ರದೇಶ): ವಿಐಪಿ ಸಾಲಿನಲ್ಲಿ ನಿರ್ಗಮಿಸುವ ವಿಚಾರವಾಗಿ ಟೋಲ್ ಸಿಬ್ಬಂದಿ ಮತ್ತು ಕಾರಿನಲ್ಲಿನದ್ದವರ ನಡುವೆ ಮಾರಾಮಾರಿ ನಡೆದಿರುವ ಘಟನೆ ಉಜ್ಜಿಯಿನಿಯ ಬೇರ್ಗಢ್ ಪೊಲೀಸ್ ಠಾಣೆ ವ್ಯಾಪ್ತಿಯ ಉನ್ಹೆಲ್ ನಾಗ್ಡಾ ರಸ್ತೆಯಲ್ಲಿರುವ ಟೋಲ್ ಗೇಟ್ನಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರ ಮೇಲೆ ಟೋಲ್ ಸಿಬ್ಬಂದಿ ಕಟ್ಟಿಗೆ, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಕಾರಿನಲ್ಲಿ ಸಂಚರಿಸುತ್ತಿದ್ದವರು ಸೇರಿದಂತೆ ಆರು ಜನರ ಮೇಲೆ ಪ್ರಕರಣ ದಾಖಲಾಗಿದೆ. ಇನ್ನು ಘಟನೆ ನಡೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.