ನೌಕಾಪಡೆ ಮಾಜಿ ಅಧಿಕಾರಿ ಮೇಲೆ ಶಿವಸೇನೆ ಕಾರ್ಯಕರ್ತರಿಂದ ಹಲ್ಲೆ... ವಿಡಿಯೋ ವೈರಲ್! - ಶಿವಸೇನೆ ಕಾರ್ಯಕರ್ತರು
ಮುಂಬೈ: ಭಾರತೀಯ ವಾಯುಸೇನೆಯ ಮಾಜಿ ಅಧಿಕಾರಿ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಮದನ್ ಶರ್ಮಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನ ಅಪಹಾಸ್ಯ ಮಾಡುವ ವ್ಯಂಗ್ಯಚಿತ್ರ ಶೇರ್ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಅನೇಕರು ಈ ವಿಡಿಯೋ ಶೇರ್ ಮಾಡಿದ್ದಾರೆ.
Last Updated : Sep 12, 2020, 7:24 AM IST