ಕೊರೊನಾಗೂ ಡೋಂಟ್ ಕೇರ್: ಸಾಮಾಜಿಕ ಅಂತರ ಗಾಳಿಗೆ ತೂರಿ ನದಿಗಿಳಿದ ಜನಸಮೂಹ! - ಅಯೋಧ್ಯೆ
ಅಯೋಧ್ಯೆ(ಉತ್ತರ ಪ್ರದೇಶ): ಅಯೋಧ್ಯೆಯ ಸರಯೂ ನದಿಯಲ್ಲಿ ಜನರು ಸಾಮಾಜಿಕ ಅಂತರ ಮರೆತು ಬೇಜವಾಬ್ದಾರಿತನ ಮೆರೆದಿದ್ದಾರೆ. ದೇಶಾದ್ಯಂತ ಕೊರೊನಾ ರೌದ್ರನರ್ತನ ಮುಂದುವರಿದಿದ್ದರೆ ಇದ್ಯಾವುದನ್ನು ಲೆಕ್ಕಿಸದೇ ಕಂಕಣ ಸೂರ್ಯ ಗ್ರಹಣದ ಬಳಿಕ ಸರಯೂ ನದಿಯಲ್ಲಿ ಒಟ್ಟೊಟ್ಟಾಗಿಯೇ ಪುಣ್ಯ ಸ್ನಾನ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಸಹ ಕೆಲವೆಡೆ ಜನರು ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವುದು ಮಾತ್ರ ವಿಪರ್ಯಾಸ.