ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆ; ರಕ್ಷಣೆ ಮಾಡಿದ ಪೊಲೀಸ್! - ಗುಜರಾತ್
ರೈಲು ಹತ್ತುವಾಗ ಇಳಿಯುವಾಗ ಸಾಕಷ್ಟು ಜಾಗ್ರತೆ ವಹಿಸುವಂತೆ ರೈಲ್ವೆ ಇಲಾಖೆ ಆಗಾಗ್ಗೆ ಸೂಚನೆ ನೀಡುತ್ತಿದ್ದರೂ, ಇಂತಹ ಅಪಾಯಕಾರಿ ಘಟನೆಗಳು ನಡೆಯುತ್ತಲೇ ಇವೆ. ಸದ್ಯ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಹಳಿಗೆ ಬೀಳುತ್ತಿದ್ದ ಮಹಿಳೆಯೊಬ್ಬರನ್ನು ರೈಲ್ವೆ ಭದ್ರತಾ ಸಿಬ್ಬಂದಿ ಕಾಪಾಡಿದ್ದಾರೆ. ಗುಜರಾತ್ನ ಅಹಮದಾಬಾದ್ ರೈಲ್ವೆ ಸ್ಟೇಷನ್ನಲ್ಲಿ ಈ ಘಟನೆ ನಡೆದಿದೆ.