ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೇರಳ ರಾಜ್ಯ ದೇಶಕ್ಕೇ ಮಾದರಿ! - Kerala model in the revival of public schools, an example for the rest of India
ತಿರುವನಂತಪುರಂ: ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ ಮಧ್ಯೆ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಕೇರಳದ ಸರ್ಕಾರಿ ಶಾಲೆಗಳು ದೊಡ್ಡ ಕ್ರಾಂತಿಯನ್ನೇ ಮಾಡಿವೆ. ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಕೈಗೊಂಡ ಉತ್ತಮ ನಿರ್ಧಾರಗಳ ಫಲವಾಗಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದು, 2019-20ನೇ ಶೈಕ್ಷಣಿಕ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯುವ ಮೂಲಕ ಖಾಸಗಿ ರಂಗಕ್ಕೆ ಸೆಡ್ಡು ಹೊಡೆದಿದೆ. ಈ ಮೂಲಕ ಕೇರಳದ ಶೈಕ್ಷಣಿಕ ಕ್ರಾಂತಿ ದೇಶಕ್ಕೆ ಮಾದರಿಯಾಗಿದೆ.