ಹುತಾತ್ಮ ರೈತರನ್ನ ಉಗ್ರರೆಂದು ಬಿಂಬಿಸಲಾಗ್ತಿದ್ದು, ಇದು ರಾಜಕೀಯ ಪಿತೂರಿ: ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ - ಮೃತ ರೈತನ ಮನೆಗೆ ಪ್ರಿಯಾಂಕಾ ಭೇಟಿ
ರಾಂಪೂರ್(ನವದೆಹಲಿ): ಕೃಷಿ ಕಾಯ್ದೆ ಪ್ರತಿಭಟನೆ ದಿನದಿಂದ ದಿನಕ್ಕೆ ರಾಜಕೀಯ ರೂಪ ಪಡೆದುಕೊಳ್ಳುತ್ತಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದ ರಾಂಪೂರ್ ಪ್ರದೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಉತ್ತರ ಪ್ರದೇಶ) ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನು ತಕ್ಷಣವೇ ಹಿಂಪಡೆದುಕೊಳ್ಳಬೇಕು. ಜತೆಗೆ ರೈತರ ಮೇಲೆ ಹಾಕಿರುವ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸುವಂತೆ ಆಗ್ರಹಿಸಿದ್ದಾರೆ.ಹುತಾತ್ಮ ರೈತರನ್ನ ಉಗ್ರರು ಎಂದು ಬಿಂಬಿಸಲಾಗುತ್ತಿದ್ದು, ಇದರಲ್ಲಿ ರಾಜಕೀಯ ಹುನ್ನಾರ ಸೇರಿಕೊಂಡಿದೆ ಎಂದು ಆರೋಪಿಸಿದ್ದಾರೆ. ಇದಕ್ಕೂ ಮೊದಲು ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ ರೈತರ ಮನೆಗೆ ಭೇಟಿ ನೀಡಿದ ಪ್ರಿಯಾಂಕಾ ಸಾಂತ್ವನ ಹೇಳಿದರು.