ಗಣೇಶ ತರುತ್ತಿದ್ದ ವೇಳೆ ಎದುರಾದ ವಿಘ್ನ... ಇಬ್ಬರು ಸಾವು, ಐವರಿಗೆ ಗಾಯ!
ಗಣೇಶ ಹಬ್ಬ ಸಮೀಪಿಸುತ್ತಿದೆ. ಯುವಕರು ಸಂಭ್ರಮದಿಂದಲೇ ವಿನಾಯಕನನ್ನ ಬರಮಾಡಿಕೊಳ್ಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಗುಜರಾತ್ನ ಬರೂಚ್ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಬೃಹದಾಕಾರದ ಗಣಪತಿ ತರುತ್ತಿದ್ದ ವೇಳೆ ವಿದ್ಯುತ್ ತಂತಿಗಳು ಅಡ್ಡವಾಗಿವೆ. ಅದನ್ನು ತಪ್ಪಿಸಲೆಂದು ಯುವಕರು ಪ್ರಯತ್ನಿಸಿದ್ದಾರೆ. ಈ ವೇಳೆ ಕರೆಂಟ್ ಶಾಕ್ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಐವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಕ್ಕಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮಟ್ಟಿತ್ತು.